Monday, September 5, 2016

ಜೀವನದಲ್ಲಿ ಜುಗುಪ್ಸೆ, ವ್ಯಕ್ತಿಯ ಆತ್ಮಹತ್ಯೆ 
                     ಜೀವನದಲ್ಲಿ ಜುಗುಪ್ಸೆಗೊಂಡ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರ ಬಳಿಯ ಸೀಗೆಹೊಸೂರು ಗ್ರಾಮದಲ್ಲಿ ನಡೆದಿದೆ. ಸೀಗೆ ಹೊಸೂರು ನಿವಾಸಿ ಪುಟ್ಟರಾಜು ಎಂಬವರು ದಿನಾಂಕ 03/09/2016ರಂದು ಮನೆಯಲ್ಲಿ ಬ್ರಾಂದಿ ಜೊತೆಗೆ ಶುಂಠಿ ಬೆಳೆಗೆ ಸಿಂಪಡಿಸುವ ವಿಷವನ್ನು ಬೆರೆಸಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಜೀವನದಲ್ಲಿ ಜುಗುಪ್ಸೆಗೊಂಡಿರುವುದೇ ಆತ್ಮಹತ್ಯೆಗೆ ಕಾರಣವೆನ್ನಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. 

ಕುಸಿದು ಬಿದ್ದು ವ್ಯಕ್ತಿಯ ಸಾವು, 
                    ದಾರಿಯಲ್ಲಿ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಾಪೋಕ್ಲು ಬಳಿಯ ಬೇತು ಗ್ರಾಮದಲ್ಲಿ ನಡೆದಿದೆ. ದಿನಾಂಕ 03/09/2016ರಂದು ಬೇತು ನಿವಾಸಿ ಎ.ಎನ್‌.ಗಣಪತಿ ಎಂಬವರ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೇರಳದ ನಿವಾಸಿ ಫ್ರಾನ್ಸಿಸ್ ಎಂಬವರು ಬೇತು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಕುಸಿದು ಬಿದ್ದು ಸಾವಿಗೀಡಾಗಿರುವುದಾಗಿ ನೀಡಿದ ದೂರಿನ ಮೇರೆಗೆ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. 

ಪಾದಚಾರಿಗೆ ರಿಕ್ಷಾ ಡಿಕ್ಕಿ, 
                ಪಾದಚಾರಿ ಬಾಲಕನೋರ್ವನಿಗೆ ರಿಕ್ಷಾ ಡಿಕ್ಕಿಯಾದ ಘಟನೆ ವಿರಾಜಪೇಟೆ ನಗರದಲ್ಲಿ ನಡೆದಿದೆ. ದಿನಾಂಕ 04/09/2016ರಂದು ವಿರಾಜಪೇಟೆ ನಗರದ ಚಿಕ್ಕಪೇಟೆ ನಿವಾಸಿ ವಿ.ಎಸ್‌.ಪ್ರೇಮ ಎಂಬವರ ಮಗ 5 ವರ್ಷ ಪ್ರಾಯದ ಬಾಲಕ ಜೀವನ್‌ ಎಂಬಾತನು ರಸ್ತೆ ಬದಿಯಲ್ಲಿ ನಿಂತುಕೊಂಡಿರುವಾಗ ಬೋಯಿಕೇರಿ ಕಡೆಯಿಂದ ಯಾವುದೋ ಒಂದು ಆಟೋ ರಿಕ್ಷಾವನ್ನು ಅದರ ಚಾಲಕ ಅತಿ ವೇಗವಾಗಿ ಚಾಲಿಸಿಕೊಂಡು ಬಂದು ಬಾಲಕ ಜೀವನ್‌ಗೆ ಡಿಕ್ಕಿಪಡಿಸಿದ ಪರಿಣಾಮ ಜೀವನ್‌ಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. 

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
                   ಜೀವನದಲ್ಲಿ ಜುಗುಪ್ಸೆಗೊಂಡ ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೀಡಾದ ಘಟನೆ ಕುಟ್ಟ ಬಳಿಯ ಬಾಡಗ ಗ್ರಾಮದಲ್ಲಿ ನಡೆದಿದೆ. ದಿನಾಂಕ 03/09/2016 ರಿಂದ 04/09/2016ರ ನಡುವೆ ಬಾಡಗ ಗ್ರಾಮದ ನಿವಾಸಿ ಕೆ.ಜೆ.ಸುಬ್ಬಯ್ಯ ಎಂಬವರು ಒಬ್ಬರೇ ಅವರ ಮನೆಯಲ್ಲಿರುವಾಗ ಯಾವುದೋ ವಿಚಾರಕ್ಕೆ ಜುಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ಕುಟ್ಟ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.