Saturday, December 17, 2016

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ:

      ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಪೋಕ್ಲು ಠಾಣಾ ಸರಹದ್ದಿನ ನಾಲಡಿ ಗ್ರಾಮದಲ್ಲಿ ನಡೆದಿದೆ. ನಾಲಡಿ ಗ್ರಾಮದ ನಿವಾಸಿ ಚೋಂದಮ್ಮ ಎಂಬವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 13-12-2016 ರಂದು ಕ್ರಿಮಿನಾಶಕ ಪದಾರ್ಥವನ್ನು ಸೇವಿಸಿ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 15-12-2016 ರಂದು ಮೃತಪಟ್ಟಿರುತ್ತಾರೆಂದು ಫಿರ್ಯಾದಿ ಕುಡಿಯರ ಮುತ್ತಪ್ಪ ರವರು ನೀಡಿದ ದೂರಿನ ಮೇರೆಗೆ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜೀವನದಲ್ಲಿ ಜಿಗುಪ್ಸೆ ವ್ಯಕ್ತಿ ಆತ್ಮಹತ್ಯೆ:

     ಸಿದ್ದಾಪುರ ಠಾಣಾ ಸರಹದ್ದಿನ ಬಾಡಗಬಾಣಂಗಾಲ ಗ್ರಾಮದಲ್ಲಿರುವ ಮಾರ್ ಗ್ರೋವ್ ಕಾಫಿ ತೋಟದಲ್ಲಿ ರೈಟರ್ ಆಗಿ ಕೆಲಸ ನಿರ್ವಹಿಸಿಕೊಂಡಿದ್ದ ಕೇನೇರ ಪ್ರವೀಣ್ (40) ಎಂಬ ವ್ಯಕ್ತಿಗೆ ಮದ್ಯಪಾನ ಮಾಡುವ ಹವ್ಯಾಸವಿದ್ದು, ವಿಪರೀತ ಸಾಲಮಾಡಿಕೊಂಡು ಜೀವನವನ್ನು ಸಾಗಿಸಲು ಕಷ್ಟಕರವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 15-12-2016 ರಂದು ಯಾವುದೋ ವಿಷ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆಂದು ಮೃತರ ಪತ್ನಿ ಶ್ರೀಮತಿ ಕೆ.ಪಿ. ಇಂದಿರ ಎಂಬವರು ನೀಡಿದ ದೂರಿನ ಮೇರೆಗೆ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಸ್ತಿ ವಿಚಾರದಲ್ಲಿ ದ್ವೇಷ, ವ್ಯಕ್ತಿಗೆ ಚೂರಿಯಿಂದ ಇರಿತ:

     ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಮತ್ತೊಬ್ಬ ವ್ಯಕ್ತಿ ಚಾಕುವಿನಿಂದ ಇರಿದು ಗಾಯಪಡಿಸಿದ ಘಟನೆ ವಿರಾಜಪೇಟೆ ತಾಲೋಕು ನಲ್ವತ್ತೊಕ್ಲು ಗ್ರಾಮದಲ್ಲಿ ನಡೆದಿದೆ. ದಿನಾಂಕ 16-12-2016 ರಂದು ನಲ್ವತ್ತೊಕ್ಲು ಗ್ರಾಮದ ನಿವಾಸಿ ನಲ್ಲಚಂಡ ಸುನಿಲ್ ಎಂಬವರ ಮೇಲೆ ಅದೇ ಗ್ರಾಮದ ರಾಜಾ ತಮ್ಮಯ್ಯ ಎಂಬವರು ಆಸ್ತಿ ವಿಚಾರದಲ್ಲಿ ಜಗಳ ಮಾಡಿ ಚೂರಿಯಿಂದ ಇರಿದು ಗಾಯಪಡಿಸಿದ್ದು, ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ, ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ:

      ಮಡಿಕೇರಿ ಗ್ರಾಮಾಂತರ ಠಾಣಾ ಸರಹದ್ದಿನ ಮರಗೋಡು ಗ್ರಾಮದಲ್ಲಿ ವಾಸವಾರಿರುವ ಪಣಿಎರವರ ಸಿದ್ದ ಎಂಬವರ ಮೇಲೆ ಅದೇ ಗ್ರಾಮದ ನಿವಾಸಿ ಪಣಿಎರವರ ರಘು ಎಂಬವರು ದ್ವೇಷವನ್ನಿಟ್ಟುಕೊಂಡು ದಿನಾಂಕ 15-12-2016 ರಂದು ಜಗಳ ಮಾಡಿ ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾವಿಗೆ ಹಾರಿ ವೃದ್ದೆ ಆತ್ಮಹತ್ಯೆ:

      ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೊಳ್ಳುಮಾಡು ಗ್ರಾಮದ ನಿವಾಸಿ ಶ್ರೀಮತಿ ಅಕ್ಕಣಿ ಎಂಬವರ ಚಿಕ್ಕಮ್ಮ ಪ್ರಾಯ 90 ವರ್ಷದ ಶ್ರೀಮತಿ ಕರಂಜಿ ಎಂಬವರು ಮಾನಸಿಕ ಅಸ್ವಸ್ಥರಾಗಿದ್ದು ದಿನಾಂಕ 16-12-2016 ರಂದು ತಾನು ವಾಸವಾಗಿದ್ದ ಲೈನುಮನೆಯ ಹತ್ತಿರದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಫಿರ್ಯಾದಿ ಶ್ರೀಮತಿ ಅಕ್ಕಣಿ ರವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.