Wednesday, March 8, 2017

ನೇಣು ಬಿಗಿದುಕೊಂಡು ವ್ಯಕ್ತಿಯ ಆತ್ಮ ಹತ್ಯೆ
         ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮದಲ್ಲಿ ವರದಿಯಾಗಿದೆ. ಕಡಗದಾಳು ಗ್ರಾಮದ ತುರ್ಕರಟ್ಟಿಯ ನಿವಾಸಿ ನಾರಾಯಣ ಎಂಬುವವರಿಗೆ ಮದ್ಯಪಾನ ಮಾಡುವ ಅಭ್ಯಾಸವಿದ್ದು ದಿನಾಂಕ 6-3-2017 ರ ರಾತ್ರಿ ಸಮಯದಲ್ಲಿ ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮಗ ಪ್ರವೀಣ್ ಕುಮಾರ್ ರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪಾದಚಾರಿಗೆ ಬೈಕ್ ಡಿಕ್ಕಿ
                 ಪಾದಚಾರಿ ಮಹಿಳೆಗೆ ಬೈಕು ಡಿಕ್ಕಿಯಾಗಿ ಗಾಯಗೊಂಡ ಘಟನೆ ಗರಗಂದೂರು ಗ್ರಾಮದಲ್ಲಿ ವರದಿಯಾಗಿದೆ. ಗರಗಂದೂರು ಗ್ರಾಮದ ನಿವಾಸಿ ಸುಶೀಲಾ ಸಿಕ್ವೇರಾ ಎಂಬುವವರು ದಿನಾಂಕ 6-3-2017 ರಂದು ನಡೆದುಕೊಂಡು ಹೋಗುತ್ತಿರುವಾಗ ಮಲ್ಲಿಕಾರ್ಜುನ ಕಾಲೋನಿಯ ಜಂಕ್ಷನ್ ಬಳಿ ನಜೀಮ್ ಎಂಬುವವರು ಬೈಕನ್ನು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಸುಶೀಲಾ ಸಿಕ್ವೇರಾ ರವರಿಗೆ ಡಿಕ್ಕಿಪಡಿಸಿ ನಿಲ್ಲಿಸದೇ ಹೊರಟು ಹೋಗಿದ್ದು, ಸುಶೀಲಾ ಸಿಕ್ವೇರರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪಾದಚಾರಿಗೆ ಬೈಕ್ ಡಿಕ್ಕಿ
               ಪಾದಚಾರಿ ಮಹಿಳೆಯೊಬ್ಬರು ರಸ್ತೆ ದಾಟುವಾಗ ಬೈಕು ಡಿಕ್ಕಿಯಾಗಿ ಗಾಯಗೊಂಡ ಘಟನೆ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ನಡೆದಿದೆ. ಅಮ್ಮತ್ತಿ ಒಂಟಿಯಂಗಡಿಯ ನಿವಾಸಿ ಕಮಲ ಎಂಬುವವರು ದಿನಾಂಕ 7-3-2017ರಂದು ಅಮ್ಮತ್ತಿ ನಗರದ ಟೈಟಾನಿಕ್ ಬಾರ್ ಮುಂದುಗಡೆ ರಸ್ತೆ ದಾಟುವಾಗ ವಿರಾಜಪೇಟೆ ನಗರದ ಮಲೆತಿರಿಕೆ ಬೆಟ್ಟದ ನಿವಾಸಿ ಸುಬ್ರಮಣಿ ಎಂಬುವವರು ಬೈಕನ್ನು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿ ಕಮಲರವರಿಗೆ ಗಾಯಗಳಾಗಿದ್ದು ಈ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಗುಂಡು ಹೊಡೆದುಕೊಂಡು ವ್ಯಕ್ತಿಯ ಆತ್ಮಹತ್ಯೆ
               ವ್ಯಕ್ತಿಯೊಬ್ಬರು ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ನಗರದ ಚಾಮುಂಡೇಶ್ವರಿ ನಗರದಲ್ಲಿ ವರದಿಯಾಗಿದೆ. ಚಾಮುಂಡೇಶ್ವರಿ ನಗರದ ನಿವಾಸಿ ಅಪ್ಪಯ್ಯ ಎಂಬುವವರಿಗೆ ಮದ್ಯಪಾನ ಮಾಡುವ ಚಟವಿದ್ದು ಹಾಗೂ ಸಾಲ ಮಾಡಿಕೊಂಡಿದ್ದು ಇದೇ ವಿಚಾರದಲ್ಲಿ ಮನನೊಂದು ದಿನಾಂಕ 7-3-2017 ರಂದು ಮನೆಯಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಗ ಕವನ್ ಕರುಂಬಯ್ಯರವರು ನೀಡಿದ ಪುಕಾರಿಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.