Wednesday, April 26, 2017

ಪತ್ರಿಕಾ ಪ್ರಕಟಣೆ.


ಜಿಲ್ಲೆಯನ್ನು ಅತ್ಯುತ್ತಮ ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನಿತ ಜಿಲ್ಲೆಯಾಗಿಸಲು ಪೊಲೀಸರ ಸಂಕಲ್ಪ 

ಕೊಡಗುಏ.26: ಜಿಲ್ಲೆಯನ್ನು ತಂಬಾಕು ನಿಯಂತ್ರಣ ಕಾಯ್ದೆಯ ಅನುಷ್ಠಾನದಲ್ಲಿ ಅತ್ಯುತ್ತಮ ಜಿಲ್ಲೆಯಾಗಿಸುವ ನಿಟ್ಟಿನಲ್ಲಿಪೊಲೀಸ್ ಅಧಿಕಾರಿಗಳಿಗೆ ನಗರದಲ್ಲಿಂದು ತರಬೇತಿ ಕಾರ್ಯಾಗಾರ ನೆಡೆಸಲಾಯಿತು.

ನಗರದಲ್ಲಿನ ಪೊಲೀಸ್ ಮೈತ್ರಿ ಸಮುದಾಯಭವನಲ್ಲಿಂದು ನಡೆದ ತರಬೇತಿ ಕಾರ್ಯಾಗಾರದಲ್ಲಿ ತಾವು ಕಾರ್ಯನಿರ್ವಹಿಸುತ್ತಿರುವ ವಲಯದಲ್ಲಿ ಕೋಟ್ಪಾ-2003 (ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ) ಕಾಯ್ದೆಯನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವಂತೆ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಲಹೆ ಸೂಚನೆ ನೀಡಲಾಯಿತು. 

ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗು ಕೋಟ್ಪಾ ಕಾಯ್ದೆಯ ಅನುಷ್ಠಾನದ ನೋಡಲ್ ಅಧಿಕಾರಿಯೂ ಆದ ಶ್ರೀ.ರಾಜೇಂದ್ರ ಪ್ರಸಾದ್ ರವರುಇತ್ತೀಚಿನ ದಿನಗಳಲ್ಲಿ ಯುವಜನತೆ ತಂಬಾಕು ಚಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ದಾಸರಾಗುತ್ತಿದ್ದಾರೆಅದರಲ್ಲೂ ಶಾಲಾ ಕಾಲೇಜುಗಳ ಮುಂದೆ ಅಕ್ರಮ ಮಾರಾಟ ಹೆಚ್ಚುತ್ತಿದ್ದು ಇವುಗಳ ಮೇಲೆ ಕಡಿವಾಣ ಹಾಕುವುದು ಅತ್ಯವಶ್ಯಕವಾಗಿದೆ. ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವ ಪ್ರಕರಣಗಳನ್ನು ಪೊಲೀಸ್ ಪ್ರಕರಣಗಳ ತಿಂಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ನಿರ್ಧಾರವನ್ನು ಈಗಾಗಲೇ ಕೈಗೊಳ್ಳಲಾಗಿದೆ. ಅದರಂತೆ ಬಹುತೇಕ ಜಿಲ್ಲೆಗಳು ಮತ್ತು ವಲಯಗಳಲ್ಲಿ ಈ ಸಂಬಂಧ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ನಮ್ಮ ಜಿಲ್ಲೆಯನ್ನು ಸದ್ಯದಲ್ಲೇ ಅತ್ಯುತ್ತಮ ಕೋಟ್ಪಾ ಕಾಯ್ದೆ ಅನುಷ್ಠಾನಿತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶ ಹೊಂದಿದ್ದುಈ ನಿಟ್ಟಿನಲ್ಲಿ ಅಧಿಕಾರಿಗಳು ಕಾಯ್ದೆಯ ಸಮರ್ಪಕ ಜಾರಿಗೆ ಶ್ರಮವಹಿಸಬೇಕೆಂದು ಆ ಮೂಲಕ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಪೊಲೀಸರು ತಮ್ಮ ಸಾಮಾಜಿಕ ಬದ್ಧತೆತೋರಬೇಕೆಂದು ತಿಳಿಸಿದರು. ಕೋಟ್ಪಾ ಕಾಯ್ದೆಯಲ್ಲಿನ ಪ್ರಮುಖ ನಿಯಮಗಳ ಮಹತ್ವ ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಉದ್ದೇಶ ಈ ಕಾರ್ಯಾಗಾರದ್ದಾಗಿದೆ ಎಂದು ತಿಳಿಸಿದರು. 

ಈ ಕೂಡಲೇ ಜಿಲ್ಲೆಯ ಎಲ್ಲಾ ಠಾಣೆಗಳಲ್ಲಿ ಕಾನೂನಿನನ್ವಯ ಸೂಚನಾಫಲಕಗಳನ್ನು ಪ್ರದರ್ಶಿಸಬೇಕೆಂದು ಹಾಗು ವಿಶೇಷ ಕಾರ್ಯಾಚರಣೆಗಳನ್ನು ಕೈಗೊಳ್ಳುವ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಯಿತು. 

ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಓ.ಆರ್. ಶ್ರೀರಂಗಪ್ಪ ಮಾತನಾಡಿಮಾನ್ಯ ಅಪರ ಜಿಲ್ಲಾಧಿಕಾರಿಗಳ ಸೂಚನೆಯನ್ವಯ ಪೊಲೀಸ್ ಹಾಗು ಆರೋಗ್ಯ ಇಲಾಖೆಗಳ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖ ಇಲಾಖೆಗಳ ಸಹಯೋಗದೊಂದಿಗೆ ಮೇ 8ರಿಂದ ನಿಯಮಿತವಾಗಿ ಜಿಲ್ಲೆಯಾಧ್ಯಂತ ವಿಶೇಷ ಕಾರ್ಯಾಚರಣೆಯನ್ನು ನೆಡೆಸಲು ಉದ್ದೇಶಿಸಿದ್ದುಈ ಕಾರ್ಯಾಚರಣೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. 

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಇನ್‍ಸ್ಟಿಟ್ಯೂಟ್ ಆಪ್ ಪಬ್ಲಿಕ್ ಹೆಲ್ತ್ ನ ಡಾ. ಜಾನ್ ಕೆನಡಿ ಹಾಗು ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಡಾ. ಹನುಮಂತರಾಯಪ್ಪರವರು ಕೋಟ್ಪಾ ಕಾಯ್ದೆಯ ಬಗ್ಗೆ ಹಾಗು ತಂಬಾಕಿನಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತಯಾರಿಸಲಾದ ವಿಶೇಷ ದೃಶ್ಯ-ಶ್ರಾವ್ಯ ಪ್ರಾತ್ಯಕ್ಷಿಕೆಯ ಮೂಲಕ ಕಾರ್ಯಾಗಾರದಲ್ಲಿ ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ ತಂಬಾಕು ನಿಯಂತ್ರಣಕ್ಕೆ ಪೊಲೀಸರು ಸಂಕಲ್ಪ ಮಾಡುವ ಮೂಲಕ ತಮ್ಮ ಬದ್ಧತೆ ತೋರುವಂತೆ ತಿಳಿಸಲಾಯಿತು. 

ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಭಾರತೀಯ ವೈದ್ಯಕೀಯ ಪರಿಷತ್ಕೊಡಗು ಘಟಕದ ಅಧ್ಯಕ್ಷರಾದ ಡಾ. ಮೋಹನ್ ಅಪ್ಪಾಜಿರವರು ತಂಬಾಕಿನ ಸೇವನೆಯಿಂದುಂಟಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.

ಇಲ್ಲಿ ಪೊಲೀಸರಿಗೆ ಅರಿವು ಮೂಡಿಸಿದ ಪ್ರಮುಖ ಅಂಶಗಳು ಇಂತಿವೆ:-

•        ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಪಾಲನೆಯಗುತ್ತಿರುವುದನ್ನು ಖಾತ್ರಿ ಮಾಡುವುದು. ಉಲ್ಲಂಘನೆ ಕಂಡುಬಂದಲ್ಲಿ ರೂ.200ರ ವರೆಗೂ ದಂಡ ಹಾಕುವುದಲ್ಲದೇ ಸೂಕ್ತ ಕ್ರಮ ಕೈಗೊಳ್ಳುವುದು.

•        ಎಲ್ಲಾ ವಿಧದ ತಂಬಾಕು ಉತ್ಪನ್ನಗಳ ಜಾಹೀರಾತುಗಳು ಕಾನೂನುಬಾಹಿರವಾಗಿದ್ದುಈ ಜಾಹೀರಾತುಗಳ ಪ್ರದರ್ಶಕರ ವಿರುದ್ಧ ಕ್ರಮಕೈಗೊಳ್ಳುವುದು.

•        ಶಾಲಾ ಕಾಲೇಜುಗಳ ಆವರಣದ 100 ಗಜಗಳ ಸುತ್ತಮುತ್ತಲ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗು ಸೇವನೆ ಕಾನೂನು ಬಾಹಿರವಾಗಿದ್ದುಉಲ್ಲಂಘನೆ ಕಂಡುಬಂದಲ್ಲಿ ಅಂತಹ ಅಂಗಡಿಗಳನ್ನು ತೆರವುಗೊಳಿಸಿ ಮಾಲೀಕರ ಮೇಲೆ ಸೂಕ್ತ ಕ್ರಮ ಜರುಗಿಸುವುದು.

•        ಶಾಸನ ವಿಧಿಸಿದ ಚಿತ್ರ ಸಹಿತ ಎಚ್ಚರಿಕೆ ಮುದ್ರಣ ಮಾಡಿರದ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕುವುದು.

•        ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಹಾಗು ಪ್ರತಿ ಗ್ರಾಮಪಂಚಾಯಿತಿಗಳ ಮಟ್ಟದಲ್ಲಿ ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿಯಮಿತವಾಗಿ ವಿಶೇಷ ಕಾರ್ಯಾಚರಣೆಯನ್ನು ಹಾಗು ಜಾಗೃತಿ ಕಾರ್ಯಕ್ರಮಗಳನ್ನು ಜಾರಿಗೆ ತರುವುದು.

•        ಜಿಲ್ಲೆಯೂ ಪ್ರಸಿದ್ಧ ಪ್ರವಾಸಿ ತಾಣಗಳನ್ನು ಹೊಂದಿದ್ದುಇಂತಹ ಪ್ರಮುಖ ಸ್ಥಳಗಳನ್ನು ಕಾನೂನಿನನ್ವಯ ಧೂಮಪಾನ ಮುಕ್ತ ವಲಯಗಳಾಗಿ ಪರಿವರ್ತಿಸುವುದು. 

ತಂಬಾಕು ನಿಯಂತ್ರಣದ ಅಗತ್ಯವೇನು?
ತಂಬಾಕು. ಇದು ಕೋಟ್ಯಂತರ ಜನರ ಆರೋಗ್ಯಕ್ಕೆ ಮಾರಕವಾಗಿ ಪರಿಣಮಿಸಿದೆ. ಈ ಮಾರಕ ತಂಬಾಕು ಸೇವನೆಯಿಂದಾಗಿ ಭಾರತದಲ್ಲಿ ಪ್ರತಿ ವರ್ಷ 10 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ. ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಇತ್ತೀಚಿನ ಸಂಶೋಧನೆಗಳ ಪ್ರಕಾರ ದೇಶದಲ್ಲಿ ಪ್ರತಿ ಎಂಟು ಸೆಕೆಂಡಿಗೆ ಒಬ್ಬರು ತಂಬಾಕು ಸೇವನೆ ಮಾಡುವವರು ಕೊನೆ ಉಸಿರೆಳೆಯುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಶೇ. 40 ರಷ್ಟು ಪುರುಷರು ಮತ್ತು ಶೇ.16 ರಷ್ಟು ಮಹಿಳೆಯರು ತಂಬಾಕು ಉತ್ಪನ್ನಗಳ ದಾಸರಾಗಿದ್ದಾರೆ. ಇದರ ಪರಿಣಾಮ ಕ್ಯಾನ್ಸರ್ಹೃದ್ರೋಗಶ್ವಾಸಕೋಶ ತೊಂದರೆ ಸೇರಿದಂತೆ ಮತ್ತಿತರೆ ಮಾರಣಾಂತಿಕ ರೋಗಗಳಿಗೆ ಲಕ್ಷಾಂತರ ಜನ ತುತ್ತಾಗುತ್ತಿದ್ದಾರೆ.

ಪೊಲೀಸ್ ಇಲಾಖೆಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಬೆಂಗಳೂರಿನ ಇನ್‍ಸ್ಟಿಟ್ಯೂಟ್ ಆಪ್ ಪಬ್ಲಿಕ್ ಹೆಲ್ತ್ ಈ ಕಾರ್ಯಾಗಾರವನ್ನು ಹಮ್ಮಿಕೊಂಡಿತ್ತು. ಇಂದು ನಡೆದ ಕಾರ್ಯಾಗಾರದಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಗೆ ಒಳಪಡುವ 35ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಯ ದುರ್ಮರಣ
                        ಪ್ರವಾಸಕ್ಕೆಂದು ಕೊಡಗು ಜಿಲ್ಲೆಗೆ ಬಂದಿದ್ದ ವಿದ್ಯಾರ್ಥಿ ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ಚೇಲವಾರ ಎಂಬಲ್ಲಿ ವರದಿಯಾಗಿದೆ. ದಿನಾಂಕ 24-4-2017 ರಂದು ಕೇರಳ ರಾಜ್ಯದ ಕೋಯಿಕ್ಕೋಡಿನ ಬಿ ಟೆಕ್ ವಿದ್ಯಾರ್ಥಿ ಆನಂದ ಎಂಬುವವರು ಸ್ನೇಹಿತರೊಂದಿಗೆ ಚೇಲಾವರದ ಕಕ್ಕಬ್ಬೆ ಬೆಟ್ಟಕ್ಕೆ ಹೋಗಿದ್ದು ಬೆಟ್ಟ ಹತ್ತುವಾಗ ಆಕಸ್ನಿಕವಾಗಿ ಕಾಲು ಜಾರಿ ಆನಂದರವರು ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿದ್ದು ವಿರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಕೇರಳದ ಪರಿಯಾರಂ ಮೆಡಿಕಲ್ ಕಾಲೇಜಿಗೆ ಕರೆದುಕೊಂಡು ಹೋಗುತ್ತಿರುವಾಗ ಮೃತಪಟ್ಟಿದ್ದು ಈ ಬಗ್ಗೆ ಸ್ನೇಹಿತ ರಾಮ ಕುಮಾರ್ ರವರು ನೀಡಿದ ದೂರಿನ ಮೇರೆಗೆ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿಯ ಮೇಲೆ ಹಲ್ಲೆ
                               ದಿನಾಂಕ 24-4-2017 ರಂದು ಮಡಿಕೇರಿ ತಾಲೂಕಿನ ಚೇರಂಗಾಲ ಗ್ರಾಮದ ನಿವಾಸಿಯಾದ ಪೂವಯ್ಯ, ಚರಣ್, ಅಮರಾವತಿ, ರೇಣುಕ, ಭಾರತಿರವರುಗಳು ಅದೇ ಗ್ರಾಮದ ಚಿದಾನಂದ ಎಂಬುವವರ ತೋಟದಲ್ಲಿ ಮರದ ಕೊಂಬೆಗಳನ್ನು ಕಡಿಯುತ್ತಿದ್ದವರನ್ನು ಕೇಳಿದಾಗ ಎಲ್ಲರೂ ಸೇರಿ ಚಿದಾನಂದರವರ ಮೇಲೆ ಹಲ್ಲೆ ನಡೆಸಿದ್ದು ಈ ಬಗ್ಗೆ ಭಾಗಮಂಡಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ಕಾಳು ಮೆಣಸು ಕಳವು
              ಒಣಗಲು ಹಾಕಿದ್ದ ಕಾಳು ಮೆಣಸನ್ನು ಕಳವು ಮಾಡಿದ ಘಟನೆ ಸೋಮವಾರಪೇಟೆ ತಾಲೂಕಿನ ಯಡವಾರ ಗ್ರಾಮದಲ್ಲಿ ವರದಿಯಾಗಿದೆ. ಯಡವಾರ ಗ್ರಾಮದ ನಿವಾಸಿಯಾದ ನಿವೃತ್ತ ಡಿ ವೈ. ಎಸ್. ಪಿ. ಯಾದ ಸೋಮಣ್ಣ ಎಂಬುವವರು ಕುಯ್ಯಿಸಿದ ಕಾಳು ಮೆಣಸನ್ನು ಮನೆಯ ಮುಂದಿನ ಅಂಗಳದಲ್ಲಿ ಒಣಗಲು ಹಾಕಿದ್ದು ದಿನಾಂಕ 25-4-2017 ರಂದು ಬೆಳಿಗ್ಗೆ ನೋಡುವಾಗ ಸುಮಾರು 50 ಕೆ ಜಿ ಯಷ್ಟು ಕಾಳು ಮೆಣಸನ್ನು ಯಾರೋ ಕಳ್ಳರು ಕಳವು ಮಾಡಿರುವುದಾಗಿ ಕೊಟ್ಟ ದೂರಿನ ಮೇರೆಗೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪಾದಚಾರಿಗೆ ಬೈಕ್ ಡಿಕ್ಕಿ
                   ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡ ಘಟನೆ ಕುಶಾಲನಗರದಲ್ಲಿ ವರದಿಯಾಗಿದೆ. ಕುಶಾಲನಗರದ ಗುಮ್ಮನಕೊಲ್ಲಿಯ ನಿವಾಸಿ ಪ್ರದೀಪ್ ಕುಮಾರ್ ಮತ್ತು ಉಮೇಶ್ ರವರು ವೀರಭೂಮಿ ಸರ್ಕಲ್ ಹತ್ತಿರ ರಸ್ತೆ ದಾಟುತ್ತಿರುವಾಗ ಕುಶಾಲನಗರದ ಕಡೆಯಿಂದ ಒಂದು ಮೋಟಾರು ಸೈಕಲ್ ನ್ನು ಅದರ ಸವಾರ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಪ್ರದೀಪ್ ಕುಮಾರ್ ರವರಿಗೆ ಡಿಕ್ಕಿಪಡಿಸಿ ಗಾಯಪಡಿಸಿ ಬೈಕನ್ನು ನಿಲ್ಲಿಸದೇ ಹೊರಟು ಹೋಗಿದ್ದು ಈ ಬಗ್ಗೆ ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

 ವ್ಯಕ್ತಿಯ ಆತ್ಮಹತ್ಯೆ
                        ಜೀವನದಲ್ಲಿ ಜುಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ನಗರದ ಮುದ್ದಣಿ ಕಾಲೋನಿಯಲ್ಲಿ ವರದಿಯಾಗಿದೆ. ಪೊನ್ನಂಪೇಟೆ ನಗರದ ಮುದ್ದಣಿ ಕಾಲೋನಿಯ ನಿವಾಸಿಯಾದ 82 ವರ್ಷ ಪ್ರಾಯದ ಉತ್ತಪ್ಪ ಎಂಬುವವರು ಬಿ.ಪಿ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಇದೇ ವಿಚಾರದಲ್ಲಿ ಜುಗುಪ್ಸೆಗೊಂಡು ದಿನಾಂಕ 25-4-2017 ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ ತಂಗಮ್ಮನರವರು ನೀಡಿದ ದೂರಿನ ಮೇರೆಗೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಅಪಘಾತ ಪ್ರಕರಣ

ದಿನಾಂಕ 24-4-2017 ರಂದು ಮೈಸೂರಿನ ಹೆಬ್ಬಾಳದ ಸತೀಶ್ ಎಂಬುವವರು ನಾಗೇಶ, ಮೂರ್ತಿ, ಪದ್ಮಾವತಿ, ಮೇಘರರವರೊಂದಿಗೆ ಧರ್ಮಸ್ಥಳದಿಂದ ಮರಳಿ ಮೈಸೂರಿಗೆ ಹೋಗುತ್ತಿರುವಾಗ ಮಡಿಕೇರಿ ಬಳಿಯ ಜೋಡುಪಾಲ ದಲ್ಲಿ ಎದುರುಗಡೆಯಿಂದ ಕೆಎಲ್-14-ಪಿ-8778 ರ ಕಾರನ್ನು ಅದರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಸತೀಶ್ ರವರು ಚಾಲನೆ ಮಾಡುತ್ತಿದ್ದ ಕಾರಿಗೆ ಡಿಕ್ಕಿ ಪಡಿಸಿದ ಪರಿಣಾಮ ಕಾರು ಜಖಂಗೊಂಡಿದ್ದು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ